ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಒಕ್ಕೂಟದ (SKJU)ಅಧೀನದಲ್ಲಿ ಕಾರ್ಯಾಚರಿಸುವ ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ಅಂಗೀಕೃತ ಮದ್ರಸಗಳ ವಿದ್ಯಾರ್ಥಿಗಳಿಗೆ ನವ ಅಧ್ಯಯನ ವರ್ಷ ಇಂದಿನಿಂದ ಆರಂಭಗೊಂಡಿದೆ. ವಿಶೇಷ ಅಂದ್ರೆ, ಈ ಬಾರಿ ತರಗತಿಗಳ ಪ್ರಾರಂಭೋತ್ಸವದ ಸಂಭ್ರಮಗಳಿಲ್ಲದೆ, ಮದ್ರಸಾ ಕಟ್ಟಡಗಳು ತೆರೆಯದೇ, ಹತ್ತು ಸಾವಿರಕ್ಕೂ ಮಿಕ್ಕ ಮದ್ರಸಗಳ ಹನ್ನೆರಡು ಲಕ್ಷ ವಿದ್ಯಾರ್ಥಿಗಳು ಅವರವರ ಮನೆಗಳಲ್ಲಿಯೇ ಕುಳಿತು ತರಗತಿಗಳಲ್ಲಿ ಪಾಲ್ಗೊಳ್ಳುತ್ತಿರುವುದು ಎಂಬುದು. ಆನ್ ಲೈನ್ ತರಗತಿಗಳಿಗಾಗಿ, ಸಮಸ್ತ ಈ ಹಿಂದೆಯೇ ಎಲ್ಲಾ ಸಿದ್ಧತೆಗಳನ್ನು ನಡೆಸಿದ್ದು, ವಿದ್ಯಾಭ್ಯಾಸ ಬೋರ್ಡ್ ಅದಕ್ಕಾಗಿ ಆರು ಕ್ಯಾಮರಾ ಯುನಿಟ್ ಗಳ ಕ್ಲಾಸ್ ರೂಂಗಳು ,22 ಪರಿಣತರಾದ ಅಧ್ಯಾಪಕರನ್ನು ನೇಮಕಗೊಳಿಸಿದೆ. ತರಗತಿ ಆರಂಭದಿಂದ ಕೊನೆಯವರೆಗೂ ವಿದ್ಯಾರ್ಥಿ ಜೊತೆ ಪೋಷಕರು ಕುಳಿತಿರಬೇಕು.ಹೋಂ ವರ್ಕ್ ನೀಡಿದರೆ, ಅದನ್ನು ಮಾಡಿ, ಮುಂದೆ ಮದ್ರಸಗಳಲ್ಲಿ ತರಗತಿ ಆರಂಭಗೊಳ್ಳುವಾಗ ಮೌಲ್ಯಮಾಪನಕ್ಕಾಗಿ ಅಧ್ಯಾಪಕರಿಗೆ ತೋರಿಸಬೇಕು. ಮನೆಯಲ್ಲಿ ತರಗತಿಯ ವಾತಾವರಣವನ್ನು ಒದಗಿಸಿಕೊಟ್ಟು,ವಿದ್ಯಾರ್ಥಿಗಳಿಗೆ ಮನೆಯವರು ಸಹಕರಿಸಬೇಕು. ಅಲ್ಲದೇ, ಮದ್ರಸಾ ಹಾಗೂ ಜಮಾಅತ್ ಕಮಿಟಿಗಳು ಸೇರಿ, ಆನ್‌ಲೈನ್ ತರಗತಿಗಳು ಆಯಾ ಮದ್ರಸಗಳ ವಿದ್ಯಾರ್ಥಿಗಳಿಗೆ ಅವರವರ ಮನೆಗಳಲ್ಲಿಯೇ ಸುಲಭವಾಗಿ ತಲುಪುವಂತೆ ಎಲ್ಲಾ ರೀತಿಯಲ್ಲಿ ಸಹಕಾರವನ್ನು ನೀಡಬೇಕು. ಮದ್ರಸಗಳು ತ...
ನಾನೊಬ್ಬ ಪಥಿಕ
ಪಥಿಕನ ಬಗ್ಗೆ ಸಿಂಪಲ್ಲಾಗಿ : ನಿಝಾಮ್ ಅನ್ಸಾರಿ - ತಂ - ದಿ. ಇಸ್ಮಾಯಿಲ್ ಯು.ಕೆ, ತಾ -ಝುಬೈದಾ. ಕಲ್ಲಡ್ಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ. ಕಾಸರಗೋಡು ಧಾರ್ಮಿಕ-ಲೌಕಿಕ ಸಮನ್ವಯ ಶಿಕ್ಷಣ ಸಂಸ್ಥೆಯಲ್ಲಿ ಪದವಿ ವ್ಯಾಸಂಗ. ಸಮಾಜಶಾಸ್ತ್ರದಲ್ಲಿ ಬಿ.ಎ ಹಾಗೂ ಅರಬಿಕ್ ನಲ್ಲಿ 'ಅನ್ಸಾರಿ' ಪದವೀಧರ, ಪ್ರಸ್ತುತ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಸ್ನಾತಕೋತ್ತರ ವಿದ್ಯಾರ್ಥಿ.