
ಭಾರತವು ಕೃಷಿ ಅವಲಂಬಿತ ಹಳ್ಳಿಗಳನ್ನೊಳಗೊಂಡ ಸಮೃದ್ಧ ದೇಶ. ದೇಶದ ಬೆಳವಣಿಗೆಯಲ್ಲಿ ವ್ಯವಸಾಯದ ಪಾತ್ರ ಬಹುಮುಖ್ಯವಾದುದು. ತಂತ್ರಜ್ಞಾನವು ದೇಶಕ್ಕೆ ಯಾವ ರೀತಿಯಲ್ಲಿ ಕೊಡುಗೆಗಳನ್ನು ನೀಡುತ್ತವೆಯೋ ಅದೇ ರೀತಿಯಲ್ಲಿ ಕೃಷಿಯ ಕೊಡುಗೆಯೂ ಕೂಡಾ ಅಪಾರವಾದುದು. ಆದರೆ ಇತ್ತೀಚಿನ ದಿನಗಳಲ್ಲಿ ಹಳ್ಳಿಗಳಲ್ಲಿ ವ್ಯವಸಾಯವು ಇಳಿಮುಖವಾಗುತ್ತಿದೆ. ಕೇವಲ ಬೆರಳೆಣಿಕೆಯಷ್ಟು ಮಂದಿ ಮಾತ್ರ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರನ್ನು ಕಾಣಬಹುದಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿನ ಜನರು ವಿದ್ಯಾವಂತರಾಗುತ್ತಲೇ ತಮ್ಮ ಪಾರಂಪರಿಕ ಕುಲ ಕಸುಬನ್ನು ನಿರ್ಲಕ್ಷಿಸಿ ನಗರಗಳತ್ತ ವಲಸೆ ಹೋಗುತ್ತಿದ್ದಾರೆ.ಕೈ ಕೆಸರು ಮಾಡಿಕೊಂಡು ದುಡಿಯುವವರ ಕೊರತೆ ಅಗಾಧವಾಗಿ ಎದ್ದು ಕಾಣುತ್ತಿದೆ. ಇಂದಿನ ನವ ತಲೆಮಾರು ಹಳ್ಳಿಗಳು ಕೇವಲ ವೃದ್ಧರಿಗೆ ಮಾತ್ರ ಯೋಗ್ಯವಾದುದು ಎಂದು ತಿಳಿದಂತಿದೆ. `ನೇಗಿಲಾ ಹಿಡಿದಾ ಹೊಲದಲಿ ಹಾಡುತ ಉಳುವಾ ಯೋಗಿಯ ನೋಡಲ್ಲಿ’ ಎಂದು ಕುವೆಂಪುರಂತಹ ಖ್ಯಾತ ಕವಿಗಳಿಂದ ಕೊಂಡಾಡಲ್ಪಟ್ಟ ಕೃಷಿ ಚಟುವಟಿಕೆಗಳಿಂದು ಕಣ್ಮರೆಯಾಗಿದೆ. ನೇಗಿಲಿನಂತಹ ಕೃಷಿ ಸಲಕರಣೆಗಳು ಇಂದು ಮ್ಯೂಸಿಯಂ ಸೇರಿಬಿಟ್ಟಿವೆ. ಇದರೊಂದಿಗೆ ಅತ್ಯಂತ ಸುಂದರವಾದ ಕೃಷಿ ಪರಂಪರೆ ಮೂಲೆಗುಂಪಾಗುತ್ತಿದೆ. ಹಳೆಯ ಕಾಲದ ಸಾಂಪ್ರದಾಯಿಕ ಬೇಸಾಯಕ್ಕೆ ಉಪಯೋಗವಾಗುತ್ತಿದ್ದ ಪರಿಕರಗಳ ಸ್ಥಾನವನ್ನು ಟ್ರಾಕ್ಟರ್,ಟಿಲ್ಲರ್ ಗಳಂತಹ ಯಂತ್ರಗಳು ಆಕ್ರಮಿಸಿಕೊಂಡಿವೆ. ಭತ್ತ ನಾಟಿ ಮಾಡುವ ಮಹಿಳೆಯರಿಂದ ಕೇಳಿ ಬರು...
ಕಾಮೆಂಟ್ಗಳು