'ಚಂದ್ರನ ಚೂರು' ಕೃತಿಯ ಹೆಸರು ಕೇಳಿದಾಗ ನಿಜವಾಗಿಯೂ ಅದೊಂದು ಕಾದಂಬರಿಯಾಗಿರಬಹುದು ಎಂದು ಭಾವಿಸಿದ್ದೆ. ಆದರೆ, ಪುಸ್ತಕ ಕೈಗೆ ತಲುಪಿದಾಗಲೇ ಗೊತ್ತಾಗಿದ್ದು, ಅದೊಂದು ಚಂದ್ರಲೋಕಕ್ಕೆ ಕೊಂಡೊಯ್ಯುವ ಅದ್ಭುತ ಕೃತಿ ಅಂತ. ತಂದೆ ಕುವೆಂಪು ಅವರ ಸಾಹಿತ್ಯದ ಹಾದಿಯಲ್ಲೇ ನಡೆದರೂ, ತೇಜಸ್ವಿಯವರ ಸಾಹಿತ್ಯವು ನಿಸರ್ಗ ವಿಸ್ಮಯ, ಭೂಗೋಳ, ಜೀವಶಾಸ್ತ್ರ, ಭತಶಾಸ್ತ್ರ, ಇತಿಹಾಸ ಹೀಗೇ ಎಲ್ಲಾ ಶಾಸ್ತ್ರಗಳ ಮಿಶ್ರಣ ರಸಾಯನ ಎಂದೇ ಹೇಳಬಹುದು.
ಚಂದ್ರನ ಚೂರು ಚಂದ್ರ ಲೋಕದ ವಿಸ್ಮಯ ದೃಶ್ಯಗಳನ್ನು ಕಟ್ಟಿಕೊಡುವ ಚೊಚ್ಚಲ ಕೃತಿ. ಬಾಹ್ಯಾಕಾಶ, ಖಗೋಳ ಶಾಸ್ತ್ರ ವಿಷಯದಲ್ಲಿ ಆಸಕ್ತಿ ಇಲ್ಲದ ನನ್ನಂತವರನ್ನೂ ಇದು ಸರಾಗವಾಗಿ ಓದಿಸಿಕೊಂಡು ಹೋಗುವಂತೆ ಮಾಡುತ್ತದೆ, ಅದಕ್ಕೆ ಕಾರಣ, ತೇಜಸ್ವಿ ಅವರ ಬರವಣಿಗೆ ಹಾಗೂ ವಿವರಣೆಯ ಶೈಲಿ..
ಜಗತ್ತಿನಲ್ಲಿ ಮನುಷ್ಯನು ಚಂದ್ರನಲ್ಲಿಗೆ ಕಾಲಿಡುವುದಕ್ಕೂ ಮುನ್ನ, ಯಾವುದೆಲ್ಲಾ ರೀತಿಯ ಪರಿಶ್ರಮಗಳು ನಡೆದಿದ್ದವು ಹಾಗೂ ಭೂಮಂಡಲ ಮತ್ತು ಚಂದ್ರನ ಕುರಿತಾಘಿ ಯಾವುದೆಲ್ಲಾ ಆಯಾಮಗಳಲ್ಲಿ ಅಧ್ಯಯನಗಳಾಗಿದ್ದುವು ಎಂಬುದರ ಸಂಪೂರ್ಣ ವಿಷಯಗಳಿವೆ. ಚಂದ್ರನಲ್ಲಿ ತಲುಪಿದ ಮನುಷ್ಯನಿಗೆ ಆದ ಅನುಭವಗಳೇನು? ನೀಲ್ ಆಮ್Fಸ್ಟ್ರಾಂಗ್ ತಂಡದ ಚಂದ್ರಯಾನದ ರಸವತ್ತಾದ ಅನುಭವಗಳು, ಚಂದಿರನ ಮಣ್ಣಲ್ಲಿ ಅಮೇರಿಕದ ಫ್ಲಾಗ್ ಮತ್ತು ಬೋಡ್F ಸ್ಥಾಪಿಸಿ ಬಂದ ಆ ಧೀರ ತಂಡದ ಬೆರಗಾಗಿಸುವ ಕ್ಷಣ ಕ್ಷಣದ ವರದಿಗಳು ಈ ಕೃತಿಯ ಲೇಖನಗಳಲ್ಲಿ ಅಡಗಿದೆ.
ಒಟ್ಟಿನಲ್ಲಿ, ನಾವು ಚಂದ್ರನ ಬಗ್ಗೆ ಇಷ್ಟಾದರೂ ತಿಳಿದುಕೊಳ್ಳುವಂತದ್ದಿದೆ ಅನ್ನುವ ಪ್ರಜ್ಞೆಯನ್ನು ಮೂಡಿಸುವುದರಲ್ಲಿ ಕೃತಿಯ ಪಾತ್ರ ಮಹತ್ತರವಾದದ್ದು. ಕಲ್ಪನಾ ಚಾವ್ಲಾ, ಸುನಿತಾ ವಿಲಿಯಮ್ಸ್ ಗಳಂತಹ ಬಾಹ್ಯಾಕಾಶ ವಿಜ್ಞಾನ ಪರಿಣತರ ಬಗ್ಗೆ ಇದರಲ್ಲಿ ಪರಾಮರ್ಶೆಗಳು ಇಲ್ಲದಿದ್ದರೂ, ಅವರ ಕುರಿತು ತಿಳಿದುಕೊಳ್ಳಲು ಸಾಕಷ್ಟಿದೆ ಎಂಬ ಯೋಚನೆ ಮೂಡಿಸುವುದರಲ್ಲಿ ಸಂದೇಹವಿಲ್ಲ.
ನಿಝಾಮ್ ಅನ್ಸಾರಿ ಕಲ್ಲಡ್ಕ
ಕಾಮೆಂಟ್‌ಗಳು